HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; 24 ಗಂಟೆಯಲ್ಲಿ ಮತ್ತೆ 700ಕ್ಕೂ ಅಧಿಕ...

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; 24 ಗಂಟೆಯಲ್ಲಿ ಮತ್ತೆ 700ಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ಸೊಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 796 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,30,795 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 5,026 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,57,685 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 07,787 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,64,88,543 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 98,727 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular