HomeKarnatakaBIG NEWS: ಎಂ ಎಲ್ ಸಿ ಆರ್.ಶಂಕರ್ ವಿರುದ್ಧ ಎಫ್ ಐ ಆರ್ ದಾಖಲು

BIG NEWS: ಎಂ ಎಲ್ ಸಿ ಆರ್.ಶಂಕರ್ ವಿರುದ್ಧ ಎಫ್ ಐ ಆರ್ ದಾಖಲು

ಹಾವೇರಿ: ಬಿಜೆಪಿ ಎಂಎಲ್ ಸಿ ಆರ್.ಶಂಕರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡಿದ ಆರೋಪ ಹಿನ್ನೆಲೆಯಲ್ಲಿ ಆರ್.ಶಂಕರ್ ವಿರುದ್ಧ ದೂರು ದಾಖಲಾದ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಚುನಾವಣೆ ವೇಳೆ ಮತದಾರರಿಗೆ ಕುಕ್ಕರ್, ಸೀರೆ ಹಂಚಿಕೆ ಮಾಡಿದ್ದಾರೆ ಎಂದು ಆರ್.ಶಂಕರ್ ವಿರುದ್ಧ ತಹಶೀಲ್ದಾರ್ ಗುರು ಬಸವರಾಜ ದೂರು ದಾಖಲಿಸಿದ್ದರು.

ಮಾರ್ಚ್ 14ರಂದು ರಾತ್ರಿ ಆರ್.ಶಂಕರ್ ಕಚೇರಿ ಮೇಲೆ ಹಾವೇರಿ ಎಸಿ, ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಅಪಾರ ವಸ್ತುಗಳು ಪತ್ತೆಯಾಗಿದ್ದವು. ಈ ಬಗ್ಗೆ ಅಧಿಕಾರಿಗಳು ಕೋರ್ಟ್ ಗೆ ಮಾಹಿತಿ ಸಲ್ಲಿಸಿದ್ದರು. ಕೋರ್ಟ್ ಅನುಮತಿಯಂತೆ ಕಂದಾಯ ಇಲಾಖೆ ಅಧಿಕಾರಿಗಳು ಆರ್.ಶಂಕರ್ ವಿರುದ್ಧ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ಟೌನ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular