HomeKarnatakaBIG NEWS: ಹೊಸ ಚರ್ಚೆ ಹುಟ್ಟುಹಾಕಿದ ಬಿಜೆಪಿ ನಾಯಕ ಸಿ.ಟಿ. ರವಿ

BIG NEWS: ಹೊಸ ಚರ್ಚೆ ಹುಟ್ಟುಹಾಕಿದ ಬಿಜೆಪಿ ನಾಯಕ ಸಿ.ಟಿ. ರವಿ

ಧಾರವಾಡ: ಉರಿಗೌಡ, ನಂಜೇಗೌಡ ವಿವಾದದ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತೊಂದು ಚರ್ಚೆ ಹುಟ್ಟುಹಾಕಿದ್ದಾರೆ.

ಧಾರವಾಡದ ಕುಂದಗೋಳದಲ್ಲಿ ಮಾತನಾಡಿದ ಸಿ.ಟಿ. ರವಿ, ಉರಿಗೌಡ ನಂಜೇಗೌಡ ಟಿಪ್ಪು ಕೊಂದಿರುವುದು ಐತಿಹಾಸಿಕವಾದ ಸತ್ಯ. ಆದರೆ ಜಾತಿ ವಿಚಾರ ಮುಂದಿಟ್ಟು ರಾಜಕಾರಣ ಮಾಡಬಾರದು ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ಕೈಮಾಬಾದ್ ಎಂದು. ಹಾಗಾಗಿ ಹಾಸನವನ್ನು ಕೈಮಾಬಾದ್ ಎಂದು ಕರೆಯುವುದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಇಷ್ಟ ಎಂದು ಹೇಳಿದ್ದಾರೆ. ಈ ಮೂಲಕ ಹಾಸನವನ್ನು ಕೈಮಾಬಾದ್ ಎಂದು ಕರೆದಿರುವುದು ನಿಜವೇ? ಎಂಬ ಹೊಸ ಚರ್ಚೆ ಆರಂಭವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular