BIG NEWS: ಅಯೋಧ್ಯೆ ಶ್ರೀರಾಮ ಮೂರ್ತಿ ನಿರ್ಮಾಣಕ್ಕೆ ಕಾರ್ಕಳದ ಕೃಷ್ಣಶಿಲೆ ಆಯ್ಕೆ

ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ಎನ್ನುವಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಪ್ರಭು ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ಕುರಿತು ಮಾಹಿತಿ ನೀಡಿದ್ದಾರೆ. ಶಿಲ್ಪಿಗಳ ತವರೂರು ಎಂದೇ ಖ್ಯಾತವಾಗಿರುವ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆ ಆಯ್ಕೆಯಾಗಿದ್ದು, ಪೂರ್ತಿ ವಿಶ್ವವೇ ಈ ಶಿಲೆಯಿಂದ ರೂಪುಗೊಳ್ಳಲಿರುವ ಭಗವಾನ್ ಶ್ರೀ ರಾಮನ ದರ್ಶನ ಪಡೆಯಲಿದೆ ಎಂಬುದು ನಮ್ಮನ್ನು ಪುಳಕಿತರನ್ನಾಗಿ ಹಾಗೂ ಪುನೀತರನ್ನಾಗಿಸುವಂತಹದಾಗಿದೆ.

ಈ ಸೇವೆ ಮಾಡುವ ಅವಕಾಶವನ್ನು ರಾಜ್ಯಕ್ಕೆ ನೀಡಿದ ಪ್ರಭು ಶ್ರೀ ರಾಮನಿಗೆ ಶಿರಸಾಷ್ಟಾಂಗ ನಮಸ್ಕಾರಗಳು ಎಂದು ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.

https://twitter.com/JoshiPralhad/status/1636670062437486593

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read