HomeKarnatakaBIG NEWS: ಮೇಲುಕೋಟೆ ಕ್ಷೇತ್ರದಲ್ಲಿ 'ಕೈ' ಅಭ್ಯರ್ಥಿ ಕಣಕ್ಕಿಳಿಸದಿರಲು ತೀರ್ಮಾನ ? ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲಿಸುವ...

BIG NEWS: ಮೇಲುಕೋಟೆ ಕ್ಷೇತ್ರದಲ್ಲಿ ‘ಕೈ’ ಅಭ್ಯರ್ಥಿ ಕಣಕ್ಕಿಳಿಸದಿರಲು ತೀರ್ಮಾನ ? ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲಿಸುವ ಸಾಧ್ಯತೆ

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದ್ದು, ಗುರುವಾರದಂದು ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದೆ. ಈ ಸಭೆಯಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಗೆ ಅಂಕಿತ ನೀಡಲಾಗಿದೆ ಎಂದು ಹೇಳಲಾಗಿದ್ದು, ಸದ್ಯದಲ್ಲಿಯೇ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.

ಹೆಚ್ಚಿನ ಸಂಖ್ಯೆಯ ಆಕಾಂಕ್ಷಿಗಳಿಲ್ಲದ ಹಾಗೂ ಬಹುತೇಕ ಹಾಲಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದ್ದು, ಇದರ ಮಧ್ಯೆ ಮಂಡ್ಯ ಜಿಲ್ಲೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕ್ಷೇತ್ರದಿಂದ ಯೋಗೇಂದ್ರ ಯಾದವ್ ಅವರ ಸ್ವರಾಜ್ ಇಂಡಿಯಾ (ಸರ್ವೋದಯ) ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ರೈತ ನಾಯಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ಹೇಳಿವೆ.

For Latest News Updates, Join Our Whatsapp Community🚩
RELATED ARTICLES

Most Popular