ನವದೆಹಲಿ: ಕೋಲಾರ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆಯಿಂದ ಸಿದ್ದರಾಮಯ್ಯ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗಿದೆ.
ಸಿದ್ಧರಾಮಯ್ಯ ಅವರು ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವ ಸಾಧ್ಯತೆ ಇದೆ. ಕೋಲಾರದಿಂದ ಸ್ಪರ್ಧೆ ಮಾಡದಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯನವರಿಗೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ನಿನ್ನೆ ನಡೆದ ಸಿಇಸಿ ಸಭೆಯಲ್ಲಿ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ.
ಕೋಲಾರ ಕ್ಷೇತ್ರದಿಂದ ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸಲಹೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಹೈಕಮಾಂಡ್ ಹೇಳಿದ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಅವರು ವರುಣಾದಿಂದ ಸ್ಪರ್ಧಿಸುವುದು ನಿಶ್ಚಿತವೆನ್ನಲಾಗಿದೆ.