HomeKarnatakaBIG BREAKING: ಮಾ. 22 ರಂದು ಬೆಳಗ್ಗೆ ಯುಗಾದಿ ದಿನವೇ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ...

BIG BREAKING: ಮಾ. 22 ರಂದು ಬೆಳಗ್ಗೆ ಯುಗಾದಿ ದಿನವೇ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

ನವದೆಹಲಿ: ಮಾರ್ಚ್ 22 ರಂದು ಬೆಳಿಗ್ಗೆ ಯುಗಾದಿ ಹಬ್ಬದ ದಿನ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ.

ಮಾಡಲು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಯುಗಾದಿ ಹಬ್ಬದ ದಿನ ಮಾರ್ಚ್ 22ರಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ನಿರ್ಧರಿಸಲಾಗಿದೆ. ಇಂದಿನ ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ 185 ಕ್ಷೇತ್ರಗಳ ಟಿಕೆಟ್ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಇದರಲ್ಲಿ 125 ಕ್ಷೇತ್ರಗಳ ಟಿಕೆಟ್ ಫೈನಲ್ ಮಾಡಲಾಗಿದ್ದು, ಮಾರ್ಚ್ 22 ರಂದು ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲ ಪಟ್ಟಿ ಬಿಡುಗಡೆಯಾದ ನಂತರ ಮತ್ತೊಮ್ಮೆ ಕೇಂದ್ರೀಯ ಚುನಾವಣೆ ಸಮಿತಿ ನಡೆಸಲಾಗುತ್ತದೆ. ಮಾರ್ಚ್ 25ರಂದು ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಹೀಗಾಗಿ ಮತ್ತೊಮ್ಮೆ ಸಭೆ ನಡೆಸಿ ಎರಡನೇ ಪಟ್ಟಿ ಸಿದ್ದಪಡಿಸುವಂತೆ ವರಿಷ್ಠರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ. ಮುಂದಿನ ಸಭೆಯಲ್ಲಿ ಎರಡು ಹೆಸರುಗಳಿರುವ 35 ರಿಂದ 40 ಕ್ಷೇತ್ರಗಳ ಪಟ್ಟಿಯನ್ನು ಅಂತಿಮಗೊಳಿಸಲು ಎಐಸಿಸಿ ನಾಯಕರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ, ಮಾರ್ಚ್ 22 ರಂದು ಬೆಳಿಗ್ಗೆ ಯುಗಾದಿ ಹಬ್ಬದ ದಿನ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular