HomeKarnatakaBIG NEWS: ಕಾಂಗ್ರೆಸ್ ಗೆ ಸಿದ್ದರಾಮಯ್ಯ, ಡಿಕೆಶಿ ಬಿಟ್ಟರೆ 3ನೇ ಲೀಡರ್ ಇಲ್ಲ; ಆರ್.ಅಶೋಕ್ ವ್ಯಂಗ್ಯ

BIG NEWS: ಕಾಂಗ್ರೆಸ್ ಗೆ ಸಿದ್ದರಾಮಯ್ಯ, ಡಿಕೆಶಿ ಬಿಟ್ಟರೆ 3ನೇ ಲೀಡರ್ ಇಲ್ಲ; ಆರ್.ಅಶೋಕ್ ವ್ಯಂಗ್ಯ

ಬಳ್ಳಾರಿ: ರಾಜ್ಯದ 224 ಕ್ಷೇತ್ರಗಳಿಗೆ ರೀಚ್ ಆಗಿರುವುದು ಬಿಜೆಪಿ ಮಾತ್ರ. ವಿಜಯ ಸಂಕಲ್ಪ ಯಾತ್ರೆ ಮೂಲಕ ಜನರು ಜಾಗೃತರಾಗಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಬಿಜೆಪಿಗೆ ರಾಜ್ಯ ಹಾಗೂ ಕೇಂದ್ರದ ಹಲವು ನಾಯಕರಿದ್ದಾರೆ. ಆದರೆ ಕಾಂಗ್ರೆಸ್ ಗೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಿಟ್ಟರೆ ಮೂರನೇ ಲೀಡರ್ ಇಲ್ಲ. ಈಗಾಗಲೇ ಕಾಂಗ್ರೆಸ್ ಆಡಳಿತಕ್ಕೆ ಬೇಸತ್ತು ಜನ ಅವರನ್ನು ಮನೆಗೆ ಕಳುಹಿಸಿದ್ದಾರೆ. ಆದರೂ ಮತ್ತೆ ಅಧಿಕಾರದ ರುಚಿ ನೋಡಲೆಂದು ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಇನ್ನು ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ನಿಂತರೂ ಗೆಲ್ಲಲ್ಲ. ಪಾಕಿಸ್ತಾನ, ಅಪಘಾನಿಸ್ತಾನಕ್ಕೆ ಹೋಗಿ ನಿಂತರೆ ಬಹುಶಃ ಅಲ್ಲಿ ಗೆಲ್ಲಬಹುದು ಅಷ್ಟೇ ಎಂದು ಟೀಕಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular