HomeKarnatakaBIG NEWS: ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಲಘುವಾಗಿ ಮಾತನಾಡಲ್ಲ ಎಂದ ಹೆಚ್ ಡಿ ಕೆ

BIG NEWS: ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಲಘುವಾಗಿ ಮಾತನಾಡಲ್ಲ ಎಂದ ಹೆಚ್ ಡಿ ಕೆ

ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿ ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತೆ ಕ್ಷೇತ್ರದ ಗೊಂದಲದಲ್ಲಿದ್ದಾರೆ. ಇದು ಆಡಳಿತ ಪಕ್ಷ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಲು ಮತ್ತಷ್ಟು ವಿಷಯ ಸಿಕ್ಕಂತಾಗಿದ್ದರೆ ಜೆಡಿಎಸ್ ಈ ಬಗ್ಗೆ ಮೌನ ವಹಿಸಿದೆ.

ಕೋಲಾರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ ಎಂದಷ್ಟೇ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋಲಾರ ಕ್ಷೇತ್ರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯನವರಿಗೆ ಸಲಹೆ ನೀಡಿರುವ ರಾಹುಲ್ ಗಾಂಧಿ ವರುಣಾದಿಂದ ಸ್ಪರ್ಧಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಮತ್ತೆ ಗೊಂದಲಕ್ಕೆ ಸಿಲುಕಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular