HomeKarnatakaBIG NEWS: ನನ್ನ ಮಾತು ಮುಂದೆ ನಿಜವಾಗಬಹುದು ಎಂದ BSY; ನಿಜವಾಗುತ್ತಾ ಸಿದ್ದರಾಮಯ್ಯ ಬಗ್ಗೆ ಮಾಜಿ...

BIG NEWS: ನನ್ನ ಮಾತು ಮುಂದೆ ನಿಜವಾಗಬಹುದು ಎಂದ BSY; ನಿಜವಾಗುತ್ತಾ ಸಿದ್ದರಾಮಯ್ಯ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ನುಡಿದ ಭವಿಷ್ಯ ?

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡಲ್ಲ ಎಂದು ಈ ಹಿಂದೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನುಡಿದ ಭವಿಷ್ಯ ನಿಜವಾಯ್ತಾ ? ಎಂಬ ಚರ್ಚೆ ಆರಂಭವಾಗಿದೆ.

ಮಾಜಿ ಸಿಎಂ ಯಡಿಯೂರಪ್ಪ, ಈ ಹಿಂದೆ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕೋಲಾರದಿಂದ ಸ್ಪರ್ಧೆ ಮಾಡಲ್ಲ. ಅವರು ಮೈಸೂರು ಭಾಗಕ್ಕೆ ಹೋಗಲು ನಾಟಕವಾಡುತ್ತಿದ್ದಾರೆ ಅಷ್ಟೇ. ಇದೆಲ್ಲ ರಾಜಕೀಯ ಸ್ಟ್ರ್ಯಾಟಜಿ. ನಾವೂ ಇದಕ್ಕೆ ತಕ್ಕಂತೆ ಸ್ಟ್ರ್ಯಾಟಜಿ ಮಾಡುತ್ತೇವೆ ಎಂದು ಹೇಳಿದ್ದರು. ಅದರಂತೆ ಇದೀಗ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಹಿಂದೆ ಸರಿಯುವ ಸಾಧ್ಯತೆ ದಟ್ಟವಾಗಿದೆ.

ರಾಹುಲ್ ಗಾಂಧಿ ಸಲಹೆ ಮೇರೆಗೆ ಸಿದ್ದರಾಮಯ್ಯ ಕೋಲಾರದಿಂದ ಹಿಂದೆ ಸರಿಯುವ ಸಾಧ್ಯತೆ ಇದ್ದು, ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಬಹುತೇಕ ನಿಶ್ಚಿತ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ಅನುಮಾನ ವಿಚಾರವಾಗಿ ಮಾತನಾಡಿರುವ ಯಡಿಯೂರಪ್ಪ, ನನ್ನ ಮಾತು ಮುಂದೆ ನಿಜವಾಗಬಹುದು. ಅವರು ಕೋಲಾರದಿಂದ ಸ್ಪರ್ಧಿಸಲ್ಲ ಎಂದು ಈ ಹಿಂದೆ ಹೇಳಿದ್ದೆ. ಸಿದ್ದರಾಮಯ್ಯ ಅನಗತ್ಯವಾಗಿ ಓಡಾಡುತ್ತಾ ಕಥೆ ಹೇಳುತಿದ್ದಾರೆ. ಅವರು ವರುಣಾದಿಂದಲೇ ಸ್ಪರ್ಧಿಸುತ್ತಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular