HomeIndiaBIG NEWS: ಒಂದೇ ದಿನದಲ್ಲಿ 800ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

BIG NEWS: ಒಂದೇ ದಿನದಲ್ಲಿ 800ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಒಂದೇ ದಿನದಲ್ಲಿ 800ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 843 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,30,799 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 5,389 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,58,161 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 09,095 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,64,97,638 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,02,591 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular