HomeKarnatakaಬೆಂಗಳೂರು ಜನತೆಗೆ ಮುಖ್ಯ ಮಾಹಿತಿ: ಇಂದು ರಾತ್ರಿಯಿಂದಲೇ ಆಟೋ ಸಂಚಾರ ಬಂದ್: ಮುಷ್ಕರಕ್ಕೆ ಕರೆ ನೀಡಿದ...

ಬೆಂಗಳೂರು ಜನತೆಗೆ ಮುಖ್ಯ ಮಾಹಿತಿ: ಇಂದು ರಾತ್ರಿಯಿಂದಲೇ ಆಟೋ ಸಂಚಾರ ಬಂದ್: ಮುಷ್ಕರಕ್ಕೆ ಕರೆ ನೀಡಿದ ಚಾಲಕರು

ಬೆಂಗಳೂರು: ನಾಳೆ ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಂಚಾರ ಬಂದ್ ಆಗಲಿದೆ. ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದು, ಇಂದು ಮಧ್ಯರಾತ್ರಿ 12 ಗಂಟೆಯಿಂದ ಆಟೋ ಸಂಚಾರ ಸಂಪೂರ್ಣ ಬಂದ್ ಮಾಡಲಾಗುವುದು.

ನಾಳೆ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಆಟೋ ಚಾಲಕರು ನಿರ್ಧರಿಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಆಟೋ ಚಾಲಕರು ಮುತ್ತಿಗೆ ಹಾಕಲಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಕ್ಕೆ ಮೂರು ದಿನ ಗಡುವು ನೀಡಲಾಗಿತ್ತು. ಗಡುವು ಇಂದಿಗೆ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಮಧ್ಯರಾತ್ರಿ 12 ಗಂಟೆಯಿಂದ ಆಟೋ ಸಂಚಾರ ಸ್ಥಗಿತಗೊಳಿಸಲಾಗುವುದು. ನಾಳೆಯಿಂದ ಆಟೋ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ಕರೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular