ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಬಗ್ಗೆ ವ್ಯಂಗ್ಯವಾಡಿರುವ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಕಾಂಗ್ರೆಸ್ ಗೆ ಬೋರ್ಡ್ ಹಾಕಿ ಮತ ಕೇಳುವ ಸ್ಥಿತಿ ಬಂದಿದೆ ಎಂದು ಲೇವಡಿ ಮಾಡಿದ್ದಾರೆ.
ಬಿಜೆಪಿ ರಾಜಕೀಯ ಇಚ್ಛಾಶಕ್ತಿ ಇರುವ ಪಕ್ಷ. ಆದರೆ ಕಾಂಗ್ರೆಸ್ ಗೆ ಯಾವುದೇ ಇಚ್ಛಾಶಕ್ತಿ ಇಲ್ಲ. ಗ್ಯಾರಂಟಿ ಕೊಡುವ ಬೋರ್ಡ್ ಹಾಕಿ ಕಾಂಗ್ರೆಸ್ ನವರು ಮತ ಕೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ನವರು ಇನ್ನೊಂದು ಬೋರ್ಡ್ ಹಾಕಲು ಮರೆತಿದ್ದಾರೆ. ಸೋಲು ಗ್ಯಾರಂಟಿ ಹಾಗಾಗಿ ಭರವಸೆ ಈಡೇರಿಸುವುದು ಗ್ಯಾರಂಟಿ ಇಲ್ಲ ಎಂದು. ಕೊಟ್ಟ ಭರವಸೆಯನ್ನು ಈಡೇರಿಸಲ್ಲ ಅಂತಾ ಬೋರ್ಡ್ ಹಾಕುವುದನ್ನು ಅವರು ಮರೆತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಇನ್ನೂ ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ಕೋಲಾರದಿಂದಲೂ ಅವರನ್ನು ಎತ್ತಂಗಡಿ ಮಾಡಿಸುವ ಕೆಲಸ ಆಗುತ್ತಿದೆ ಎಂದು ಟೀಕಿಸಿದ್ದಾರೆ.