HomeCrimeಸ್ಕೂಟರ್ ಗೆ ಟ್ರಕ್ ಡಿಕ್ಕಿ; ಮೃತ ಸವಾರರನ್ನು 500 ಮೀಟರ್ ಎಳೆದೊಯ್ದ ಚಾಲಕ

ಸ್ಕೂಟರ್ ಗೆ ಟ್ರಕ್ ಡಿಕ್ಕಿ; ಮೃತ ಸವಾರರನ್ನು 500 ಮೀಟರ್ ಎಳೆದೊಯ್ದ ಚಾಲಕ

ದೆಹಲಿಯಲ್ಲಿ ಹೊಸ ವರ್ಷಾಚರಣೆ ವೇಳೆ ನಡೆದ ಭೀಕರ ಅಪಘಾತ ಪ್ರಕರಣ ಮಾಸುವ ಮುನ್ನವೇ ಉತ್ತರ ಪ್ರದೇಶದಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ.

ಮೂವರು ಪ್ರಯಾಣಿಸುತ್ತಿದ್ದ ಸ್ಕೂಟರ್‌ಗೆ ಟ್ರಕ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನವನ್ನು ಸುಮಾರು 500 ಮೀಟರ್ ಎಳೆದೊಯ್ದ ಪರಿಣಾಮ ಅಂಬೆಗಾಲಿಡುವ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ ದುರಂತ ಪ್ರಕರಣ ನಡೆದಿದೆ. ಶಹಜಾನ್ ಪುರ ಜಿಲ್ಲೆಯ ಕತ್ರಾ ಮೇಲ್ಸೇತುವೆ ಬಳಿ ಈ ಘಟನೆ ನಡೆದಿದೆ.

ಲಾಲ್‌ಪುರ ಗ್ರಾಮದ ನಿವಾಸಿಗಳಾದ ರಾಮ್‌ದಿನ್ (40), ಅವರ ಅತ್ತಿಗೆ ಸುರ್ಜಾ ದೇವಿ (35) ಮತ್ತು ಅವರ ಮೂರು ವರ್ಷದ ಸೋದರಳಿಯ ತಮ್ಮ ಮನೆಗೆ ಹಿಂದಿರುಗುತ್ತಿದ್ದಾಗ ಹಿಂದಿನಿಂದ ಟ್ರಕ್ ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಎಸ್‌. ಆನಂದ್‌ ಮಾತನಾಡಿ, ಸ್ಕೂಟರ್‌ ಟ್ರಕ್ ಗೆ ಸಿಕ್ಕಿ ಸುಮಾರು 500 ಮೀಟರ್‌ ದೂರ ಎಳೆದೊಯ್ಯಲಾಗಿದೆ.

ಸ್ಥಳಕ್ಕಾಗಮಿಸಿದ ನಂತರ ಪೊಲೀಸ್ ಸಿಬ್ಬಂದಿ ಗಾಯಾಳುಗಳನ್ನು ಬರೇಲಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಿದರು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಅವರು ಹೇಳಿದರು.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ . ಟ್ರಕ್ ಚಾಲಕ ತನ್ನ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವಿಚಾರದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular