HomeEntertainmentಎರಡೇ ದಿನದಲ್ಲಿ 100 ಕೋಟಿ ರೂ. 'ಕಬ್ಜ'

ಎರಡೇ ದಿನದಲ್ಲಿ 100 ಕೋಟಿ ರೂ. ‘ಕಬ್ಜ’

ರಿಯಲ್ ಸ್ಟಾರ್ ಉಪೇಂದ್ರ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ‘ಕಬ್ಜ’ ಎರಡೇ ದಿನದಲ್ಲಿ 100 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ.

ಈ ಮೂಲಕ ಆರ್. ಚಂದ್ರು ನಿರ್ದೇಶನದ ‘ಕಬ್ಜ’ ಭರ್ಜರಿ ಯಶಸ್ಸು ಪಡೆದುಕೊಂಡಿದ್ದು, ಬಿಡುಗಡೆಯಾದಲ್ಲೆಲ್ಲ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್ ಗಳಿಕೆಯಲ್ಲಿ ದಾಖಲೆ ಬರೆದು ಎರಡು ದಿನದಲ್ಲಿ 100 ಕೋಟಿ ಗಳಿಸಿದೆ. ಮೊದಲ ದಿನ ಸುಮಾರು 54 ಕೋಟಿ ರೂ. ಕಲೆಕ್ಷನ್ ಮಾಡಿದ್ದ ‘ಕಬ್ಜ’ ಎರಡನೇ ದಿನವೂ ಅದಕ್ಕಿಂತ ಹೆಚ್ಚು ಗಳಿಕೆ ಕಂಡಿದೆ. ಮೂರನೇ ದಿನ ಭಾನುವಾರ ಕೂಡ ಕಲೆಕ್ಷನ್ ಏರುಗತಿಯಲ್ಲೇ ಸಾಗಿದೆ. ಕನ್ನಡ, ಹಿಂದಿ, ತೆಲುಗು, ತಮಿಳು ಸೇರಿದಂತೆ ಬಹು ಭಾಷೆಗಳಲ್ಲಿ ವಿಶ್ವದಾದ್ಯಂತ 4000 ಸ್ಕ್ರೀನ್ ಗಳಲ್ಲಿ ಪ್ರದರ್ಶನ ಕಾಣುತ್ತಿರುವ ‘ಕಬ್ಜ’ ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಹೊಸ ದಾಖಲೆ ಬರೆಯುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular