ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ. ಯಡ್ರಾಮಿ ತಾಲೂಕಿನ ಹರನಾಳ -ಬಿ ಗ್ರಾಮದಲ್ಲಿ ಘಟನೆ ನಡೆದಿದೆ.
ತಲೆ ಮೇಲೆ ಕಲ್ಲು ಎತ್ತಿ ಹಾಕಿ 40 ವರ್ಷದ ಅನುಸೂಯ ಎಂಬುವರನ್ನು ಹತ್ಯೆ ಮಾಡಲಾಗಿದೆ. ನಿನ್ನೆ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಯಡ್ರಾಮಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.