
ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್ ಕಣಮಿಟಿಕೆ ಬಳಿ ಟೋಲ್ ಕಟ್ಟುವುದನ್ನು ತಪ್ಪಿಸಲು ಹೋಗಿ ಮತ್ತೆ ವಾಪಸ್ ಯೂಟರ್ನ್ ಮಾಡಿಕೊಂಡು ಬೆಂಗಳೂರಿನತ್ತ ಬರುವಾಗ ಕುಂಬಳಗೋಡು ಬಳಿ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಸಿದ್ದಪ್ಪ ಎಂದು ಗುರುತಿಸಲಾಗಿದ್ದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ.

