ಹಾಸನ: ವಿಧಾನಸಭಾ ಚುನಾವಣೆ ಘೋಷಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಮ್ಮನಹಟ್ಟಿಯ ಗಂಗಾ ಮಾಲಿಕಾ ದೇವಿ ದೇವಸ್ಥಾನದ ಜಾತ್ರೆಯನ್ನೇ ರದ್ದು ಮಾಡಲಾಗಿದೆ.
ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಅಮ್ಮನಹಟ್ಟಿಯ ಗಂಗಾ ಮಾಲಿಕಾ ದೇವಿ ದೇವಸ್ಥಾನದಲ್ಲಿ ಮಾರ್ಚ್ 22 ಹಾಗೂ 23ರಂದು ಅದ್ದೂರಿ ಜಾರಾ ಮಹೋತ್ಸವ ನಿಗದಿಯಾಗಿತ್ತು. ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಕಾನೂನು ಸುವ್ಯವಸ್ಥೆ ಕಾಯುವ ನಿಟ್ಟಿನಲ್ಲಿ ಜಾತ್ರೆ ನಿರ್ಬಂಧಿಸಲಾಗಿದೆ.
ಇನ್ನು ದೇವಾಲಯದ ಹಣಕಾಸಿನ ವಿಚಾರವಾಗಿ ಕೆಲ ಅಹಿತಕರ ಘಟನೆಗಳು ನಡೆದಿದ್ದು, ಹಿಂಸಾಚಾರ ಸೃಷ್ಟಿಸಿದ ಕೆಲ ಕಿಡಿಗೇಡಿಗಳನ್ನು ಗಡಿಪಾರು ಮಾಡಲಾಗಿದೆ. ಈ ಹಿನ್ನೆಲೆಯಲಿ ಚುನಾವಣೆ ಸಂದರ್ಭವಿರುವುದರಿಂದ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಿರಲು ಮುಂಜಾಗೃತ ಕ್ರಮವಾಗಿ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಜಾತ್ರೆಯನು ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ.