HomeKarnatakaBIG NEWS: ಬಿಜೆಪಿ ನಾಯಕರು ವಾಟ್ಸಪ್ ಯುನಿವರ್ಸಿಟಿ ಮೂಲಕ ಹೊಸ ಇತಿಹಾಸ ಬರೆಯಲು ಹೊರಟಿದ್ದಾರೆ; ಡಿ.ಕೆ.ಶಿ...

BIG NEWS: ಬಿಜೆಪಿ ನಾಯಕರು ವಾಟ್ಸಪ್ ಯುನಿವರ್ಸಿಟಿ ಮೂಲಕ ಹೊಸ ಇತಿಹಾಸ ಬರೆಯಲು ಹೊರಟಿದ್ದಾರೆ; ಡಿ.ಕೆ.ಶಿ ವಾಗ್ದಾಳಿ

ಬೆಳಗಾವಿ: ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದಾರೆ. ವ್ಯಂಗ್ಯವಾಗಿ ಮಾತನಾಡಿದ್ದಾರೆ. ಟೀಕಿಸಲಿ ಬಿಡಿ. ಆದರೆ ಬಿಜೆಪಿ ನಾಯಕರು ನಮ್ಮ ಯೋಜನೆಗಳನ್ನು ಫಾಲೋ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಉರಿಗೌಡ, ನಂಜೇಗೌಡ ಸಿನಿಮಾ ಮಾಡಲು ಸಚಿವ ಮುನಿರತ್ನ ಹೊರಟಿರುವ ವಿಚಾರವಾಗಿ ಕಿಡಿಕಾರಿದ ಡಿ.ಕೆ.ಶಿವಕುಮಾರ್, ಬಿಜೆಪಿ ನಾಯಕರು ಇತಿಹಾಸವನ್ನು ತಿರುಚಲು ಹೊರಟಿದ್ದಾರೆ. ವಾಟ್ಸಪ್ ಯುನಿವರ್ಸಿಟಿ ಮೂಲಕ ಹೊಸ ಇತಿಹಾಸ ಸೃಷ್ಟಿ ಮಾಡಲು ಹೋಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಗರು ಒಕ್ಕಲಿಗರಿಗೆ ಅಗೌರವ ತೋರುವ ಕೆಲಸ ಮಾಡುತ್ತಿದ್ದಾರೆ. ಉರಿಗೌಡ, ನಂಜೇಗೌಡ ಅವರ ಹೆಸರನ್ನು ಎಲ್ಲಿ ಕೇಳಿದ್ದೇವೆ? ಆ ಹೆಸರೇ ಈವರೆಗೆ ಕೇಳಿರಲಿಲ್ಲ. ಶೋಭಾ ಕರಂದ್ಲಾಜೆ ಹಾಗೂ ಸಿ.ಟಿ.ರವಿ ಒಕ್ಕಲಿಗ ಸಮುದಾಯದ ವಿರೋಧಿಗಳು ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular