HomeKarnatakaBIG NEWS: ಉರಿಗೌಡ, ನಂಜೇಗೌಡ ಸಿನಿಮಾ ನಿರ್ಮಾಣ ವಿಚಾರ; ಸಚಿವ ಮುನಿರತ್ನ ಯೂಟರ್ನ್

BIG NEWS: ಉರಿಗೌಡ, ನಂಜೇಗೌಡ ಸಿನಿಮಾ ನಿರ್ಮಾಣ ವಿಚಾರ; ಸಚಿವ ಮುನಿರತ್ನ ಯೂಟರ್ನ್

ಮಂಡ್ಯ: ರಾಜ್ಯ ರಾಜಕೀಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಉರಿಗೌಡ, ನಂಜೇಗೌಡ ಸಿನಿಮಾ ವಿಚಾರಕ್ಕೆ ಇದೀಗ ಬ್ರೇಕ್ ಬಿದ್ದಂತಾಗಿದೆ. ಉರಿಗೌಡ, ನಂಜೇಗೌಡ ಸಿನಿಮಾ ನಿರ್ಮಾಣ ಮಾಡಲ್ಲ ಎಂದು ತೋಟಗಾರಿಕಾ ಸಚಿವ ಮುನಿರತ್ನ ಅವರು  ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಆದಿಚುಂಚನಗಿರಿಯ ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿರತ್ನ, ನಾನು ಉರಿಗೌಡ, ನಂಜೇಗೌಡ ಸಿನಿಮಾ ಮಾಡಲ್ಲ ಎಂದು ಹೇಳುವ ಮೂಲಕ ಯೂಟರ್ನ್ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ.

ದೊಡ್ಡಮಟ್ಟದಲ್ಲಿ ಸಿನಿಮಾ ಮಾಡಲು ತೀರ್ಮಾನಿಸಿದ್ದೆ. ಮೊದಲು ಉರಿಗೌಡ, ನಂಜೇಗೌಡ ಸಿನಿಮಾ ಮಾಡುವ ಆಲೋಚನೆ ಇರಲಿಲ್ಲ. ಆದರೆ ಹೆಚ್.ಡಿ.ಕುಮಾರಸ್ವಾಮಿ ಹೇಳಿದ ಬಳಿಕ ಸಿನಿಮಾ ಮಾಡಲು ಯೋಚಿಸಿದೆ. ಆದರೆ ಈಗ ಸಿನಿಮಾ ನಿರ್ಮಾಣ ಮಾಡಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular