HomeKarnatakaBIG NEWS: 5 ಹಾಗೂ 8ನೇ ತರಗತಿ ಬೋರ್ಡ್ ಪರೀಕ್ಷೆ; ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ

BIG NEWS: 5 ಹಾಗೂ 8ನೇ ತರಗತಿ ಬೋರ್ಡ್ ಪರೀಕ್ಷೆ; ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ

ಬೆಂಗಳೂರು: 5 ಹಾಗೂ 8ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘಟನೆಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿವೆ.

5 ಹಾಗೂ 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಶಿಕ್ಷಣ ಇಲಾಖೆಗೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಅಲ್ಲದೇ ಮಾರ್ಚ್ 27ರಿಂದ ಪರೀಕ್ಷೆ ನಡೆಸಲು ಸೂಚಿಸಿತ್ತು. ಆದರೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಇದೀಗ ಅನುದಾನರಹಿತ ಖಾಸಗಿ ಶಾಲೆಗಳ ಸಂಘಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿವೆ. ಅಲ್ಲದೇ ಮಾರ್ಚ್ 27ರಿಂದ ಪರೀಕ್ಷೆಗೆ ಆದೇಶ ಇರುವುದರಿಂದ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿವೆ.

ಅರ್ಜಿ ಪರಿಶೀಲಿಸಿರುವ ಸುಪ್ರೀಂ ಕೋರ್ಟ್ ಮಾರ್ಚ್ 27ರಂದು ವಿಚರಣೆ ನಡೆಸುವುದಾಗಿ ತಿಳಿಸಿದೆ. ಆದರೆ ಪರೀಕ್ಷೆ ಆರಂಭದ ದಿನವೇ ವಿಚಾರಣೆ ಬೇಡ ಮೊದಲೇ ವಿಚಾರಣೆ ನಡೆಸುವಂತೆ ಶಾಲೆಗಳ ಪರ ವಕೀಲರು ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular