HomeKarnatakaBIG NEWS: ನಾಳೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ; ಆಕಾಂಕ್ಷಿಗಳಲ್ಲಿ ಹೆಚ್ಚಿದ ಕುತೂಹಲ

BIG NEWS: ನಾಳೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ; ಆಕಾಂಕ್ಷಿಗಳಲ್ಲಿ ಹೆಚ್ಚಿದ ಕುತೂಹಲ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರು ಈಗಾಗಲೇ ರಾಜ್ಯದಾದ್ಯಂತ ಒಂದು ಸುತ್ತಿನ ಪ್ರವಾಸ ಮುಗಿಸಿದ್ದಾರೆ. ಇದರ ಮಧ್ಯೆ ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

ಮೊದಲ ಪಟ್ಟಿಯಲ್ಲಿ ನೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುತ್ತದೆ ಎಂದು ಹೇಳಲಾಗಿದ್ದು, ಬಹುತೇಕ ಎಲ್ಲ ಹಾಲಿ ಶಾಸಕರಿಗೂ ಟಿಕೆಟ್ ಸಿಗುವುದು ಖಾತ್ರಿಯಾಗಿದೆ. ಅಲ್ಲದೆ ಒಂದೇ ಹೆಸರು ಶಿಫಾರಸ್ಸುಗೊಂಡಿರುವ ಕ್ಷೇತ್ರಗಳಿಗೂ ಸಹ ಅಭ್ಯರ್ಥಿಗಳ ಹೆಸರು ಘೋಷಿಸುವ ಸಾಧ್ಯತೆ ಇದೆ.

ಈ ಮೊದಲು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಯು ಟರ್ನ್ ತೆಗೆದುಕೊಂಡಿದ್ದು, ನಾಳೆ ಪ್ರಕಟವಾಗಲಿರುವ ಕಾಂಗ್ರೆಸ್ ಪಟ್ಟಿಯಲ್ಲಿ ಅವರ ಹೆಸರನ್ನು ಪ್ರಕಟಿಸಲಾಗುತ್ತದಾ ? ಒಂದೊಮ್ಮೆ ಪ್ರಕಟಗೊಂಡರೆ ಯಾವ ಕ್ಷೇತ್ರದಿಂದ ಅವರ ಸ್ಪರ್ಧೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular