HomeKarnatakaBIG NEWS: ನನ್ನ ಸ್ಪರ್ಧೆ ವಿಚಾರವಾಗಿ ನಾಳೆ ಮತ್ತೊಮ್ಮೆ ತಿಳಿಸುತ್ತೇನೆ; ಅಭಿಮಾನಿಗಳಿಗೆ ಸಿದ್ದರಾಮಯ್ಯ ಭರವಸೆ

BIG NEWS: ನನ್ನ ಸ್ಪರ್ಧೆ ವಿಚಾರವಾಗಿ ನಾಳೆ ಮತ್ತೊಮ್ಮೆ ತಿಳಿಸುತ್ತೇನೆ; ಅಭಿಮಾನಿಗಳಿಗೆ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧಿಸುವಂತೆ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಬೆಂಗಳೂರಿನ ಸಿದ್ದರಾಮಯ್ಯ ನಿವಾಸದ ಬಳಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು, ಕೋಲಾರದಿಂದಲೇ ಸ್ಪರ್ಧೆ ಮಾಡಬೇಕು. ಇಲ್ಲವಾದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ. ಈ ವೇಳೆ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ನನಗೆ ಕೋಲಾರದಿಂದ ಸ್ಪರ್ಧೆ ಮಾಡಬೇಡಿ ಎಂದು ರಾಹುಲ್ ಗಾಂಧಿ ಹೇಳಿಲ್ಲ. 1 ಪರ್ಸೆಂಟ್ ಕೂಡ ರಿಸ್ಕ್ ತೆಗೆದುಕೊಳ್ಳಬೇಡಿ ಎಂದು ಹೇಳಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಪರ್ಧೆ ವಿಚಾರದಲ್ಲಿ ಸುಮ್ಮನೆ ಅಪಪ್ರಚಾರ ಮಾಡಲಾಗುತ್ತಿದೆಯಷ್ಟೇ. ರಾಹುಲ್ ಗಾಂಧಿ ಕೋಲಾರದಿಂದ ನಿಲ್ಲಬೇಡಿ ಅಂದಿಲ್ಲ. ನೀವು ರಾಜ್ಯಾದ್ಯಂತ ಪ್ರವಾಸ ಮಾಡಬೇಕು ಎಂದು ಹೇಳಿದ್ದಾರೆ.

ನನ್ನ ಸ್ಪರ್ಧೆ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಅವರು ಎಲ್ಲಿ ಸೂಚಿಸುತ್ತಾರೋ ಅಲ್ಲಿಂದ ಸ್ಪರ್ಧೆ ಮಾಡುತ್ತೇನೆ. ಕ್ಷೇತ್ರದ ಬಗ್ಗೆ ನಮ್ಮ ಕುಟುಂಬದ ಸದಸ್ಯರ ಜೊತೆ ಇಂದು ನಾನು ಚರ್ಚೆ ಮಾಡುತ್ತೇನೆ. ಸ್ಪರ್ಧೆ ವಿಚಾರದ ಬಗ್ಗೆ ನಾಳೆ ಮತ್ತೊಮ್ಮೆ ತಿಳಿಸುತ್ತೇನೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular