HomeKarnatakaBIG NEWS: ಅಕಾಲಿಕ ಮಳೆಗೆ ಕುಸಿದ ಮನೆ; ಬಾಲಕಿ ದುರ್ಮರಣ

BIG NEWS: ಅಕಾಲಿಕ ಮಳೆಗೆ ಕುಸಿದ ಮನೆ; ಬಾಲಕಿ ದುರ್ಮರಣ

ರಾಯಚೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ರಾಯಚೂರು ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ. ಅಕಾಲಿಕ ಮಳೆಯಿಂದಾಗಿ ಮನೆ ಕುಸಿದು ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿಥಿಲಗೊಂಡಿದ್ದ ಮನೆ ಮಳೆಯಿಂದಾಗಿ ಕುಸಿದು ಬಿದ್ದಿದೆ. ಮನೆಯಲ್ಲಿದ್ದ 13 ವರ್ಷದ ಬಾಲಕಿ ನಿರ್ಮಲಾ ಮೃತಪಟ್ಟಿದ್ದಾಳೆ. ನಿರ್ಮಲಾ ತಾಯಿ ಹಾಗೂ ತಂಗಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular