HomeKarnatakaBIG NEWS: ನಟ ಚೇತನ್ ಗೆ 14 ದಿನ ನ್ಯಾಯಂಗ ಬಂಧನ; ಕೋರ್ಟ್ ಆದೇಶ

BIG NEWS: ನಟ ಚೇತನ್ ಗೆ 14 ದಿನ ನ್ಯಾಯಂಗ ಬಂಧನ; ಕೋರ್ಟ್ ಆದೇಶ

ಬೆಂಗಳೂರು: ವಿವಾದಾತ್ಮಕ ಪೋಸ್ಟ್ ಪ್ರಕರಣದಲ್ಲಿ ಬಂಧಿತರಾಗಿರುವ ನಟ ಚೇತನ್ ಗೆ 14 ದಿನಗಳ ಕಾಲ ನ್ಯಾಯಂಗ ಬಂಧನ ವಿಧಿಸಲಾಗಿದೆ.

ಹಿಂದುತ್ವದ ಬಗ್ಗೆ ಕೆಟ್ಟದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಚೇತನ್ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ನಟ ಚೇತನ್ ನನ್ನು ಬಂಧಿಸಿ, ಕೋರ್ಟ್ ಗೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ಬೆಂಗಳೂರಿನ 32ನೇ ಎಸಿಎಂಎಂ ಕೋರ್ಟ್ ಚೇತನ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲೇ ನಟ ಚೇತನ್ ಪರ ವಕೀಲರು ಜಾಮೀನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular