HomeKarnatakaBIG NEWS: ಇಂದು ಬಿಡುಗಡೆಯಾಗಬೇಕಿದ್ದ ʼಕೈʼ ಅಭ್ಯರ್ಥಿಗಳ ಮೊದಲ ಪಟ್ಟಿ ಮುಂದೂಡಿಕೆ

BIG NEWS: ಇಂದು ಬಿಡುಗಡೆಯಾಗಬೇಕಿದ್ದ ʼಕೈʼ ಅಭ್ಯರ್ಥಿಗಳ ಮೊದಲ ಪಟ್ಟಿ ಮುಂದೂಡಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ. ಇಂದು ಬಿಡುಗಡೆಯಾಗಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಮುಂದೂಡಿಕೆಯಾಗಿದೆ.

ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದು, ಇನ್ನು 2-3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬೇಕಿತ್ತು. ಆದರೆ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗಲ್ಲ, ಇನ್ನು 2-3 ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುಗಾದಿ ಹಬ್ಬದ ದಿನವೇ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು.

For Latest News Updates, Join Our Whatsapp Community🚩
RELATED ARTICLES

Most Popular