HomeKarnatakaಸುಳ್ಳು ಆಶ್ವಾಸನೆ ಕೊಡಲ್ಲ, ಕೊಟ್ಟ ಭರವಸೆ ಈಡೇರಿಸುತ್ತೇವೆ: ಡಿ.ಕೆ. ಶಿವಕುಮಾರ್

ಸುಳ್ಳು ಆಶ್ವಾಸನೆ ಕೊಡಲ್ಲ, ಕೊಟ್ಟ ಭರವಸೆ ಈಡೇರಿಸುತ್ತೇವೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿ ನಾಯಕರ ರೀತಿ ನಾವು ಸುಳ್ಳು ಆಶ್ವಾಸನೆ ಕೊಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷದಿಂದ ಜನ ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಈ ಕೆಟ್ಟ ಆಡಳಿತ ತೊಲಗಲಿ. ರಾಜ್ಯದ ಜನರಿಗೆ ಹಲವು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಜನಪರವಾಗಿರಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಹಾಕುತ್ತೇವೆ ಎಂದು ಬಿಜೆಪಿಯವರು ಹೇಳಿದ್ದರು. ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದರು. ಏನಾದರೂ ಮಾಡಿದ್ರಾ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ. ನಾವು ಕೊಟ್ಟ ಭರವಸೆಗಳನ್ನು ಈಡೇರಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿಯೇ ತೀರುತ್ತೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular