HomeIndiaBIG NEWS: ಒಂದೇ ದಿನದಲ್ಲಿ 1,100ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

BIG NEWS: ಒಂದೇ ದಿನದಲ್ಲಿ 1,100ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ 1000ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 1,134 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,813 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 7,026 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,60,279 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 07,673 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,21,180 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,03,831 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular