HomeKarnatakaBIG NEWS: ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂಬುದನ್ನು ಸಿದ್ದರಾಮಯ್ಯನವರೇ ನಿರ್ಧರಿಸುತ್ತಾರೆ; ಡಿ.ಕೆ.ಶಿವಕುಮಾರ್

BIG NEWS: ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂಬುದನ್ನು ಸಿದ್ದರಾಮಯ್ಯನವರೇ ನಿರ್ಧರಿಸುತ್ತಾರೆ; ಡಿ.ಕೆ.ಶಿವಕುಮಾರ್

ಬೆಂಗಳೂರು: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಸಿದ್ದರಾಮಯ್ಯ ಕ್ಷೇತ್ರ ಗೊಂದಲ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ಸಿದ್ದರಾಮಯ್ಯ ಅವರೇ ನಿರ್ಧಾರ ಮಾಡ್ತಾರೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಾದಾಮಿಯಲ್ಲಿಯೂ ಸಿದ್ದರಾಮಯ್ಯ ಸಾಕಷ್ಟು ಅಭಿವೃದ್ದಿ ಮಾಡಿದ್ದಾರೆ. ಬಾದಾಮಿಯಲ್ಲಿ ಆಯ್ಕೆಯಾದ ಬಳಿಕ ಆ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯನ್ನು ತಂದಿದ್ದಾರೆ. ಮೈಸೂರಿಗೂ ಸಿದ್ದರಾಮಯ್ಯ ಕೊಡುಗೆ ಅಪಾರವಿದೆ. ಕೋಲಾರದಿಂದ ನಿಲ್ಲಬೇಕು ಎಂಬುದು ಸಿದ್ದರಾಮಯ್ಯನವರ ಆಸೆ. ಹಾಗಾಗಿ ಅಲ್ಲಿನ ಕ್ಷೇತ್ರಗಳ ಜನರು ಸಿದ್ದರಾಮಯ್ಯ ತಮ್ಮ ಕ್ಷೇತ್ರಕ್ಕೆ ಬರಲಿ ಎಂದು ನಿರೀಕ್ಷಿಸುವುದು ಸಹಜ ಎಂದರು.

ಕೋಲಾರದಿಂದ ಸ್ಪರ್ಧಿಸಬೇಡಿ ಎಂದು ಹೈಕಮಾಂಡ್ ಹೇಳಿಲ್ಲ. ರಾಜ್ಯದ ಎಲ್ಲಾ ಭಾಗಕ್ಕೂ ಪ್ರವಾಸ ಮಾಡಿ ಚುನಾವಣೆ ಪ್ರಚಾರ ಮಾಡಬೇಕು ಎಂದು ಹೈಕಮಾಂಡ್ ಸೂಚಿಸಿದೆ. ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಸಿದ್ದರಾಮಯ್ಯನವರೇ ನಿರ್ಧಾರ ಮಾಡ್ತಾರೆ. ಅವರು ಯಾವ ಕ್ಷೇತ್ರದಲ್ಲಿ ನಿಂತರೂ ಅವರ ಪರವಾಗಿ ನಾನು ಕೆಲಸ ಮಾಡುತ್ತೇನೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular