HomeKarnatakaBIG NEWS: ಹಾಡಹಗಲೇ ನಡುರಸ್ತೆಯಲ್ಲಿ ಮಹಿಳೆಯ ಬರ್ಬರ ಹತ್ಯೆ

BIG NEWS: ಹಾಡಹಗಲೇ ನಡುರಸ್ತೆಯಲ್ಲಿ ಮಹಿಳೆಯ ಬರ್ಬರ ಹತ್ಯೆ

ಕಲಬುರ್ಗಿ: ಹಾಡಹಗಲೇ ಮಹಿಳೆಯನ್ನು ಕೆಡವಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜಂಜಂ ಕಾಲೋನಿಯಲ್ಲಿ ನಡೆದಿದೆ.

ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ಮಹಿಳೆಯನ್ನು ಕಾರು ಡಿಕ್ಕಿಹೊಡೆಸಿ ಕೆಳಗೆ ಕೆಡವಿದ್ದು, ಕೆಳಗೆ ಬಿದ್ದ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈಯ್ಯಲಾಗಿದೆ.

ಜಂಜಂ ಕಾಲೋನಿ ನಿವಾಸಿ ನುಜತ್ ಸುಲ್ತಾನ್ (36) ಕೊಲೆಯಾದ ಮಹಿಳೆ. ನುಜತ್ ಸಾಮಾಜಿಕ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಜೀಮ್ ಶೇಖ್, ವಸೀಂ ಶೇಖ್,ನಯಿಂ, ನದೀಂ ವಿರುದ್ಧ ಹತ್ಯೆ ಆರೋಪ ಕೇಳಿಬಂದಿದೆ. ಗುಲಬುರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular