
ಈ ಮೊದಲು ಸಚಿವ ಸಂಪುಟ ಸಭೆಯನ್ನು ಮಾರ್ಚ್ 23 ರ ಇಂದು ಬೆಳಿಗ್ಗೆ ನಡೆಸಲು ತೀರ್ಮಾನಿಸಲಾಗಿತ್ತಾದರೂ ಯುಗಾದಿ ಆಚರಣೆಗಾಗಿ ಬಹುತೇಕ ಎಲ್ಲ ಸಚಿವರು ತಮ್ಮ ತಮ್ಮ ಊರುಗಳಿಗೆ ತೆರಳಿರುವ ಕಾರಣ ಮಾರ್ಚ್ 24ಕ್ಕೆ ಮುಂದೂಡಿಕೆ ಮಾಡಲಾಗಿತ್ತು.
ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದ ಕುರಿತಂತೆ ಅದಕ್ಕೆ ಪೂರಕವಾಗಿ ಒಂದು ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

