HomeKarnatakaBIG NEWS: ಕ್ಷೇತ್ರ ಗೊಂದಲದ ನಡುವೆ ನಾಳೆ ಬಾದಾಮಿಯಲ್ಲಿ ಸಿದ್ದರಾಮಯ್ಯ ರೋಡ್ ಶೋ; ಕುತೂಹಲ ಮೂಡಿಸಿದ...

BIG NEWS: ಕ್ಷೇತ್ರ ಗೊಂದಲದ ನಡುವೆ ನಾಳೆ ಬಾದಾಮಿಯಲ್ಲಿ ಸಿದ್ದರಾಮಯ್ಯ ರೋಡ್ ಶೋ; ಕುತೂಹಲ ಮೂಡಿಸಿದ ನಡೆ

ಬಾದಾಮಿ: ಕ್ಷೇತ್ರ ಗೊಂದಲದ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ನಾಳೆ ಬಾದಾಮಿ ಕ್ಷೇತ್ರದ ಪ್ರವಾಸ ಕೈಗೊಂಡಿದ್ದು, ರೋಡ್ ಶೋ ನಡೆಸುತ್ತಿದ್ದಾರೆ. ಕೋಲಾರ, ವರುಣಾ ಕ್ಷೇತ್ರಗಳ ಗೊಂದಲದ ನಡುವೆ ಹಾಲಿ ಕ್ಷೇತ್ರ ಬಾದಾಮಿಯಲ್ಲಿ ಸಿದ್ದರಾಮಯ್ಯ ರೋಡ್ ಶೋ ನಡೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ನಾಳೆ 500 ಕೋಟಿ ವೆಚ್ಚದ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಾದಾಮಿ-ಕೆರೂರು ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಳಿಕ ರಾಮದುರ್ಗದಿಂದ ಸಿದ್ದರಾಮಯ್ಯ ರೋಡ್ ಶೋ ನಡೆಸಲಿದ್ದಾರೆ.

ರಾಮದುರ್ಗ ಕ್ರಾಸ್ ನಿಂದ ಎಪಿಎಂಸಿ ಆವರಣದವರೆಗೆ ಸಿದ್ದರಾಮಯ್ಯ ರೋಡ್ ಶೋನಲ್ಲಿ ಭಾಗಿಯಾಗಲಿರುವುದು ತೀವ್ರ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular