BREAKING: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

ಬೆಂಗಳೂರು: ನಾಳೆಯಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರ ಧರಣಿಗೆ ಹೈಕೋರ್ಟ್ ಬ್ರೇಕ್ ಹಾಕಿದೆ.

ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೆಚ್.ಎಂ.ವೆಂಕಟೇಶ್ ಎಂಬುವವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, 3 ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಸೂಚನೆ ನೀಡಿದೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ತಡೆಯಲು ಸಧ್ಯಕ್ಕೆ ಮುಷ್ಕರಕ್ಕೆ ಮುಂದಾಗಬಾರದು. ಏಪ್ರಿಲ್ 6ರಂದು ಸಾರಿಗೆ ನೌಕರರ ಸಂಘಟನೆಗಳೊಂದಿಗೆ ಸರ್ಕಾರ ಸಭೆ ನಡೆಸಲಿದೆ. ಈ ನಿಟ್ಟಿನಲ್ಲಿ ಸಾರಿಗೆ ಮುಷ್ಕರಕ್ಕೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read