ಪ್ರಯಾಣಿಕರಿಂದ 1 ಕೋಟಿ ರೂಪಾಯಿಗೂ ಅಧಿಕ ದಂಡ ವಸೂಲಿ ಮಾಡಿದ ರೈಲ್ವೆ ಇಲಾಖೆಯ ಮೊದಲ ಮಹಿಳಾ ಟಿಕೆಟ್ ತಪಾಸಣೆ ಸಿಬ್ಬಂದಿ ಕೇಂದ್ರ ರೈಲ್ವೇ ಸಚಿವಾಲಯದ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ದಕ್ಷಿಣ ರೈಲ್ವೆಯ ಮುಖ್ಯ ಟಿಕೆಟ್ ಪರಿವೀಕ್ಷಕಿ ರೊಸಾಲಿನ್ ಅರೋಕಿಯಾ ಮೇರಿ ಅವರು ಟಿಕೆಟ್ ಪಡೆಯದ ಪ್ರಯಾಣಿಕರಿಂದ 1.03 ಕೋಟಿ ರೂಪಾಯಿ ದಂಡವನ್ನು ಸಂಗ್ರಹಿಸಿದ್ದಾರೆ.
ರೈಲ್ವೆ ಸಚಿವಾಲಯವು ಮೇರಿ ಪ್ರಯಾಣಿಕರಿಂದ ದಂಡವನ್ನು ಸಂಗ್ರಹಿಸುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದು ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದೆ.
“ತಮ್ಮ ಕರ್ತವ್ಯಗಳಿಗೆ ದೃಢವಾದ ಬದ್ಧತೆಯನ್ನು ತೋರಿಸುತ್ತಾ, @GMS ರೈಲ್ವೇಯ CTI (ಚೀಫ್ ಟಿಕೆಟ್ ಇನ್ಸ್ ಪೆಕ್ಟರ್) ಶ್ರೀಮತಿ ರೋಸಲಿನ್ ಅರೋಕಿಯಾ ಮೇರಿ ಪ್ರಯಾಣಿಕರಿಂದ 1.03 ಕೋಟಿ ರೂ.ಗಳ ದಂಡವನ್ನು ಸಂಗ್ರಹಿಸಿದ ಮೊದಲ ಭಾರತೀಯ ರೈಲ್ವೇಯ ಟಿಕೆಟ್ ತಪಾಸಣೆ ಸಿಬ್ಬಂದಿಯ ಮೊದಲನೇ ಮಹಿಳೆಯಾಗಿದ್ದಾರೆ” ಎಂದು ರೈಲ್ವೆ ಸಚಿವಾಲಯ ಟ್ವೀಟ್ ಮಾಡಿದೆ. ರೋಸಲಿನ್ ಅವರ ಬಗ್ಗೆ ನೆಟ್ಟಿಗರು ಸಹ ಶ್ಲಾಘಿಸಿದ್ದಾರೆ.