
ಐಶ್ವರ್ಯ (22) ಮೃತ ಯುವತಿ. ತೀರ್ಥ ಗ್ರಾಮದಲ್ಲಿ ಜಾತ್ರೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಯುವತಿ ನದಿಯಲ್ಲಿ ಸ್ನಾನ ಮಾಡಿ ಕೃಷ್ಣಾನದಿಯಿಂದ ದೇವಸ್ಥಾನದವರೆಗೆ ದೀರ್ಘದಂಡ ನಮಸ್ಕಾರ ಮಾಡುತ್ತಾ ಸಾಗಿದ್ದಳು.
ಈ ವೇಳೆ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಯುವತಿಯ ತಲೆ ಮೇಲೆ ಹರಿದಿದೆ. ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅಥಣಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

