HomeKarnatakaBIG NEWS: ಚುನಾವಣಾ ಅಕ್ರಮ; 16 ಕೆಜಿ ಬೆಳ್ಳಿ ವಸ್ತುಗಳು, 4 ಲಕ್ಷ ಹಣ ಜಪ್ತಿ

BIG NEWS: ಚುನಾವಣಾ ಅಕ್ರಮ; 16 ಕೆಜಿ ಬೆಳ್ಳಿ ವಸ್ತುಗಳು, 4 ಲಕ್ಷ ಹಣ ಜಪ್ತಿ

ಜೇವರ್ಗಿ: ವಿಧನಾಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಡು ಕಾಂಚಾಣದ ಸದ್ದು ಜೋರಾಗಿದ್ದು, ಚುನಾವಣಾ ಅಕ್ರಮ ತಡೆಯಲು ಪೊಲೀಸರು ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ ತೀವ್ರಗೊಳಿಸಿದ್ದಾರೆ.

ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಚಿಗರಳ್ಳಿ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಹಣ, ಬೆಳ್ಳಿ ವಸ್ತುಗಳು ವಶಕ್ಕೆ ಪಡೆಯಲಾಗಿದೆ.

ಯಾದಗಿರಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕಾರನ್ನು ಚಿಗರಳ್ಳಿ ಚೆಕ್ ಪೋಸ್ಟ್ ನಲ್ಲಿ ತಡೆದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ 16 ಕೆಜಿ ಬೆಳ್ಳಿ ವಸ್ತುಗಳು, 4 ಲಕ್ಷ ಹಣ ಪತ್ತೆಯಾಗಿದೆ. ನಗದು ಹಣಕ್ಕೆ ಯಾವುದೇ ದಾಖಲೆಗಳು ಇಲ್ಲದ ಕಾರಣ ಪೊಲೀಸರು ಬೆಳ್ಳಿ ವಸ್ತುಗಳು ಹಾಗೂ 4 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular