ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಮ್ಮ ಮನೆಗೆ ಆಗಮಿಸಿದ್ದು ಸಂತೋಷವಾಗಿದೆ. ಅವರು ನನ್ನೊಂದಿಗೆ ಮಾತನಾಡಿದ್ದು ಖುಷಿ ತಂದಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ.
ಮಾಜಿ ಸಿಎಂ ಬಿ.ಎಸ್.ವೈ ನಿವಾಸದಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಉಪಹಾರ ಕೂಟ ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪನವರ ಬೆಂಗಳೂರಿನ ಕುಮಾರಕೃಪ ನಿವಾಸಕ್ಕೆ ಅಮಿತ್ ಶಾ ಹಾಗೂ ಬಿಜೆಪಿ ನಾಯಕರು ಭೇಟಿ ನೀಡಿ ಉಪಹಾರ ಸವಿದರು. ಈ ವೇಳೆ ಅಮಿತ್ ಶಾ ವಿಜಯೇಂದ್ರ ಬೆನ್ನು ತಟ್ಟಿ ಪ್ರೋತ್ಸಾಹ ನೀಡಿದ್ದಾರೆ.
ಉಪಹಾರ ಕೂಟದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಅಮಿತ್ ಶಾ ನನ್ನೊಂದಿಗೆ ಮಾತನಡಿದ್ದು ಖುಷಿ ತಂದಿದೆ. ಪಕ್ಷದ ಕೆಲಸ ಮಾಡಲು ಇನ್ನಷ್ಟು ಶಕ್ತಿ ಸಿಕ್ಕಂತಾಗಿದೆ ಎಂದರು.
ಇದೇ ವೇಳೆ ವರುಣಾ ಕ್ಷೇತ್ರದಿಂದ ಸ್ಪರ್ಧೆ ವಿಚಾರವಾಗಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂಬುದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು, ಈಗಗಾಲೇ ಶಿಕಾರಿಪುರದಲ್ಲಿ ಒಂದು ಸುತ್ತಿನ ಪ್ರವಾಸ ಮುಗಿದಿದೆ ಎಂದು ಹೇಳಿದರು.