HomeKarnatakaBIG NEWS: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪೊಲೀಸ್ ವಶಕ್ಕೆ

BIG NEWS: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪೊಲೀಸ್ ವಶಕ್ಕೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮೀಸಲಾತಿ ಅಸ್ತ್ರ ಪ್ರಯೋಗಿಸಿದ್ದು, ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜಭವನ ಚಲೋ ಪ್ರತಿಭಟನೆ ನಡೆದಿದ್ದು, ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ವಿಚಾರವಾಗಿ ಶೆಡ್ಯೂಲ್ 9ಕ್ಕೆ ಸೇರಿಸುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಮೀಸಲಾತಿ ಹೆಚ್ಚಳ ಬಗ್ಗೆ ಕಳೆದ 5 ತಿಂಗಳಿಂದ ಶಿಫಾರಸು ಮಾಡಿರಲಿಲ್ಲ, ಈಗ ಮಾಡಿದ್ದಾರೆ. ಎಸ್ ಸಿ, ಎಸ್ ಟಿ ಸುಮುದಾಯ ಮೀಸಲಾತಿ ಹೆಚ್ಚಳ ಶೆಡ್ಯೂಲ್ 9ಕ್ಕೆಸೇರಿಸಬೇಕು. ರಾಜ್ಯ ಸರ್ಕಾರಕ್ಕೆ ಕಿವಿ ಕೇಳುತ್ತಿಲ್ಲ ಎಂದು ಕಿಡಿಕಾರಿದರು.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದರು.

For Latest News Updates, Join Our Whatsapp Community🚩
RELATED ARTICLES

Most Popular