ಕಾರವಾರ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ವಿಚಾರಣೆಗೆ ಒಳಪಟ್ಟಿದ್ದ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಗಣಪತಿ ಭಟ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನೆಲೆಮಾವು ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದರು. ಸಿದ್ದಾಪುರ ತಾಲೂಕಿನ ನಡಿಮನೆ ಸಮೀಪ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ತನಿಖಾಧಿಕಾರಿಗಳು ಅವರನ್ನು ಐದಾರು ತಿಂಗಳ ಹಿಂದೆ ವಿಚಾರಣೆಗೆ ಒಳಪಡಿಸಿದ್ದರು. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆಯಿಂದ ಅವರ ಆತ್ಮಹತ್ಯೆ ಹಿಂದಿನ ಕಾರಣ ಗೊತ್ತಾಗಬೇಕಿದೆ.