
ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ನಾಯಕರು ಆತ್ಮೀಯವಾಗಿ ಸ್ವಾಗತಿಸಿದರು.
ಪ್ರಧಾನಿ ಮೋದಿ ಇಂದು ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ ಲೋಕಾರ್ಪಣೆಗೊಳಿಸಲಿದ್ದು, ಮೆಟ್ರೋ ಸ್ಟೇಷನ್ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಕೆಲವೇ ಹೊತ್ತಲ್ಲಿ ಪ್ರಧಾನಿ ಮೋದಿ ಸತ್ಯಸಾಯಿ ಆಶ್ರಮದ ಹೆಲಿಪ್ಯಾಡ್ ನಿಂದ ನೇರ ಮೆಟ್ರೋ ಸ್ಟೇಷನ್ ಗೆ ಆಗಮಿಸಲಿದ್ದು, ಮೆಟ್ರೋಸ್ಟೇಷನ್ ಉದ್ಘಾಟಿಸಲಿದ್ದಾರೆ.

