HomeKarnatakaBIG NEWS: ಬೆಣ್ಣೆನಗರಿಯಲ್ಲಿ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ವಿಶೇಷ ಉಡುಗೊರೆ

BIG NEWS: ಬೆಣ್ಣೆನಗರಿಯಲ್ಲಿ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ವಿಶೇಷ ಉಡುಗೊರೆ

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸಿದ್ದು, ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ದಾವಣಗೆರೆಯಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಮತ ಬೇಟೆ ನಡೆಸಲಿದ್ದಾರೆ.

ದಾವಣಗೆರೆಯಲ್ಲಿ ಇಂದು ಬಿಜೆಪಿಯ ವಿಜಯಸಂಕಲ್ಪದ ನಾಲ್ಕು ರಥಗಳು ಆಗಮಿಸಲಿದ್ದು, ಮಹಾಸಂಗಮ ಸಮಾವೇಶ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ.

ದಾವಣಗೆರೆಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಬೆಳ್ಳಿ ಇಟ್ಟಿಗೆ ಕಾಣಿಕೆ ಕೊಡಲು ಬಿಜೆಪಿ ಸಿದ್ಧತೆ ನಡೆಸಿದೆ. ಬಿಜೆಪಿ ಮುಖಂಡ ಯಶ್ವಂತರಾವ್ ಜಾಧವ್ ಅವರು ಪ್ರಧಾನಿ ಮೋದಿಯವರಿಗೆ ಬೆಳ್ಳಿ ಇಟ್ಟಿಗೆ ಗಿಫ್ಟ್ ಕೊಡಲು ನಿರ್ಧರಿಸಿದ್ದು, ಅಯೋಧ್ಯೆ ರಾಮಮಂದಿರ ಮತ್ತು ರಾಮನ ಕೆತ್ತನೆ ಇರುವ ಇಟ್ಟಿಗೆಯನ್ನು ಉಡುಗೊರೆಯಾಗಿ ನೀಡುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular