ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜಿ8 ಕೂಟ ರಚಿಸಲಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ಸೇತರ ರಾಜ್ಯ ಸರ್ಕಾರಗಳ ಮುಖ್ಯಮಂತ್ರಿಗಳು ಜಿ8 ಕೂಟ ರಚನೆ ಘೋಷಣೆ ಮಾಡಿದ್ದಾರೆ.
ಚುನಾವಣೆ ಹೊರತಾದ ಅಭಿವೃದ್ಧಿ ಕಾರ್ಯ, ಸರ್ಕಾರದ ಕಾರ್ಯವೈಖರಿ ಬಗ್ಗೆ ಪರಸ್ಪರ ಸಹಕಾರ ಮನೋಭಾವದೊಂದಿಗೆ ಒಟ್ಟಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಈ ಕೂಟ ರಚಿಸಲಾಗಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇರಳ ಸಿಎಂ ಪಿಣರಾಯಿ ವಿಜಯನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ಬಿಹಾರ ಸಿಎಂ ನಿತೀಶ್ ಕುಮಾರ್ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ಜಿ8 ಕೂಟದ ಸದಸ್ಯರಲ್ಲಿ ಸೇರಿದ್ದಾರೆ.
ಬಿಜೆಪಿಯನ್ನು ಮಣಿಸಲು ಬಿಜೆಪಿಯೇತರ ಹಾಗೂ ಕಾಂಗ್ರೆಸ್ಸೇತರ ರಾಜ್ಯ ಸರ್ಕಾರಗಳ ಮುಖ್ಯಮಂತ್ರಿಗಳು ಜಿ8ಟು ಕೂಟ ರಚನೆ ಘೋಷಿಸಿದ್ದಾರೆ.