HomeIndiaದುಡುಕಿನ ನಿರ್ಧಾರ ಕೈಗೊಂಡ ದಂಪತಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ದುಡುಕಿನ ನಿರ್ಧಾರ ಕೈಗೊಂಡ ದಂಪತಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಹೈದರಾಬಾದ್: ಹೈದರಾಬಾದ್‌ ನ ಕುಶೈಗುಡಾ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಪತಿ, ಪತ್ನಿ ಮತ್ತು ಅವರ 9, 5 ವರ್ಷ ವಯಸ್ಸಿನ ಇಬ್ಬರು ಮಕ್ಕಳನ್ನು ಒಳಗೊಂಡ ನಾಲ್ವರ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ.

ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್(9) ಮತ್ತು ನಿಹಾಲ್(5) ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶನಿವಾರ ಮಧ್ಯಾಹ್ನ ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿದ್ದಾರೆ. ಪೊಟಾಶಿಯಂ ಸೈನೈಡ್ ವಿಷ ಸೇವಿಸಿ ದಂಪತಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ದಂಪತಿಯ ಇಬ್ಬರು ಮಕ್ಕಳು ಮಾನಸಿಕವಾಗಿ ಅಸ್ವಸ್ಥರಾಗಿದ್ದರು. ಸತೀಶ್ ಮತ್ತು ಅವರ ಪತ್ನಿ ವೇದಾ ಅವರು ಆಸ್ಪತ್ರೆಗಳಿಗೆ ಅಲೆದಾಡಿದರೂ ತಮ್ಮ ಮಕ್ಕಳ ಸ್ಥಿತಿ ಸುಧಾರಿಸದ ಕಾರಣ ಖಿನ್ನತೆಗೆ ಒಳಗಾಗಿದ್ದರು. ನಿರಾಶೆಯಿಂದ ದಂಪತಿಗಳು ತಮ್ಮ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ಪ್ರಾಥಮಿಕ ವಿಚಾರಣೆಯಲ್ಲಿ ಇಬ್ಬರೂ ಮಕ್ಕಳು ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ (ಮಾನಸಿಕವಾಗಿ ಅಸ್ವಸ್ಥರಾಗಿದ್ದಾರೆ) ಅವರಿಗೆ ಚಿಕಿತ್ಸೆ ನೀಡಲಾಗಿದ್ದರೂ, ಮಕ್ಕಳು ಚೇತರಿಸಿಕೊಳ್ಳುತ್ತಿಲ್ಲ ಎಂದು ಪೋಷಕರು ಖಿನ್ನತೆಗೆ ಒಳಗಾಗಿ ಈ ರೀತಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಕುಶೈಗುಡ ಪೊಲೀಸ್ ಠಾಣೆ ಪಿ. ವೆಂಕಟೇಶ್ವರಲು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular