HomeKarnatakaBIG NEWS: ಸಿಎಂ ಭೇಟಿಯಾದ ರಮೇಶ್ ಜಾರಕಿಹೊಳಿ; ಆಪ್ತನಿಗೆ ಅಥಣಿ ಟಿಕೆಟ್ ಗಾಗಿ ಲಾಬಿ....?

BIG NEWS: ಸಿಎಂ ಭೇಟಿಯಾದ ರಮೇಶ್ ಜಾರಕಿಹೊಳಿ; ಆಪ್ತನಿಗೆ ಅಥಣಿ ಟಿಕೆಟ್ ಗಾಗಿ ಲಾಬಿ….?

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಬಿಜೆಪಿ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿದೆ. ಈ ನಡುವೆ ಟಿಕೆಟ್ ಆಕಾಂಕ್ಷಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ.

ಹುಬ್ಬಳ್ಳಿಯ ಆದರ್ಶ್ ನಗರದಲ್ಲಿ ಸಿಎಂ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ, ಸಿಎಂ ಜೊತೆ ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದರು.

ಸಿಎಂ ಭೇಟಿ ಬಳಿಕ ಮಾತನಾಡಿದ ರಮೇಶ್ ಜಾರಕಿಹೊಳಿ, ಅಥಣಿ ಟಿಕೆಟ್ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಯಾರಿಗೆ ಟಿಕೆಟ್ ಕೊಡಬೇಕು ಎಂದು ವರಿಷ್ಠರು ತೀರ್ಮಾನ ಮಾಡ್ತಾರೆ ಎಂದರು. ಅಥಣಿ ಬಿಜೆಪಿ ಟಿಕೆಟ್ ತನ್ನ ಆಪ್ತ ಮಹೇಶ್ ಕುಮಟಳ್ಳಿಗೆ ಕೊಡಬೇಕು ಎಂದು ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದು, ಈ ನಿಟ್ಟಿನಲ್ಲಿ ಸಿಎಂ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular