HomeKarnatakaBIG NEWS: GST ಅಧಿಕಾರಿಗಳ ದಾಳಿ; BJP ಟಿಕೆಟ್ ಆಕಾಂಕ್ಷಿಗೆ ಸೇರಿದ 3 ಕೋಟಿ ಮೌಲ್ಯದ...

BIG NEWS: GST ಅಧಿಕಾರಿಗಳ ದಾಳಿ; BJP ಟಿಕೆಟ್ ಆಕಾಂಕ್ಷಿಗೆ ಸೇರಿದ 3 ಕೋಟಿ ಮೌಲ್ಯದ ವಸ್ತುಗಳು ವಶಕ್ಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲೆಡೆ ಕಾಂಚಾಣ, ಗಿಫ್ಟ್ ಗಳದ್ದೇ ಸದ್ದು ಕೇಳುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಜಿ ಎಸ್ ಟಿ ಅಧಿಕಾರಿಗಳು ನಡೆಸಿದ ದಿಢೀರ್ ದಾಳಿಯಲ್ಲಿ ಮತದಾರರಿಗೆ ಹಂಚಲು ತಂದಿದ್ದ ಬರೋಬ್ಬರಿ 3 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಯಲಹಂಕ ಬಳಿಯ ಇಂಟರ್ ನ್ಯಾಷನಲ್ ಶಾಲೆ ಹಿಂಭಾಗದ ಗೋಡೌನ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 3 ಕೋಟಿ ಮೌಲ್ಯದ ಕುಕ್ಕರ್, ಗಡಿಯಾರಗಳನ್ನು ಜಪ್ತಿ ಮಾಡಿದ್ದಾರೆ.

ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನೇಂದ್ರ ಕುಮಾರ್ ಗೆ ಸೇರಿದ ವಸ್ತುಗಳಿವು ಎನ್ನಲಾಗಿದ್ದು, ಮತದಾರರಿಗೆ ಹಂಚಲು ಸಂಗ್ರಹಿಸಲಾಗಿತ್ತು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular