HomeKarnatakaBIG NEWS: ಗೂಂಡಾಗಳ ಬಾಯಲ್ಲಿ ಗೂಂಡಾ ಶಬ್ಧಗಳೇ ಬರುತ್ತವೆ; ಡಿ.ಕೆ.ಶಿವಕುಮಾರ್ ವಿರುದ್ಧ ಯತ್ನಾಳ್ ವಾಗ್ದಾಳಿ

BIG NEWS: ಗೂಂಡಾಗಳ ಬಾಯಲ್ಲಿ ಗೂಂಡಾ ಶಬ್ಧಗಳೇ ಬರುತ್ತವೆ; ಡಿ.ಕೆ.ಶಿವಕುಮಾರ್ ವಿರುದ್ಧ ಯತ್ನಾಳ್ ವಾಗ್ದಾಳಿ

ಬೆಂಗಳೂರು: ಮೀಸಲಾತಿ ವಿಚಾರವಾಗಿ ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಲ್ಲಿ ಯಾರೂ ಗೂಂಡಾ ನಾಯಕರಿಲ್ಲ, ಗೂಂಡಾಗಳ ಬಾಯಲ್ಲಿ ಗೂಂಡಾ ಶಬ್ದಗಳೇ ಬರುತ್ತವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಮೀಸಲಾತಿ ವಿಚಾರದಲ್ಲಿ ಬಿಜೆಪಿ ಶ್ರೀಗಳಿಗೆ ಫೋನ್ ಮಾಡಿ ಒಪ್ಪಿಕೊಳ್ಳುವಂತೆ ಒತ್ತಡ ಹಾಕಿದ್ದಾರೆ ಎಂಬ ಡಿ.ಕೆ.ಶಿವಕುಮಾರ್ ಆರೋಪ ಸುಳ್ಳು. ಯಾರಾದರೂ ಆದಿಚುಂಚನಗಿರಿ ಶ್ರೀಗಳಿಗೆ, ಕೂಡಲಸಂಗಮ ಶ್ರೀಗಳಿಗೆ ಬೆದರಿಕೆ ಹಾಕಲು ಸಾಧ್ಯವೇ? ಯಾರಿಗೂ ಧಮ್ಕಿ ಹಾಕಿಲ್ಲ, ಧಮ್ಕಿ ಹಾಕುವ ಸಂಸ್ಕೃತಿಯೂ ನಮ್ಮದಲ್ಲ ಎಂದು ಹೇಳಿದರು.

ಮೀಸಲಾತಿ ಹೆಚ್ಚಳ ಮಾಡಿರುವುದು ಸಿಎಂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆ. ಎಲ್ಲರಿಗೂ ಮೀಸಲಾತಿಯನ್ನು ಹಂಚಲಾಗಿದೆ. ಇದರಿಂದ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular