alex Certify ಇಂದಿನಿಂದ 5, 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ 5, 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ

ಬೆಂಗಳೂರು: ಐದನೇ ತರಗತಿಗೆ ಮಾರ್ಚ್ 27 ರಿಂದ 30 ರವರೆಗೆ ಮತ್ತು 8 ನೇ ತರಗತಿಗೆ ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಮೌಲ್ಯಾಂಕನ ನಡೆಯಲಿದೆ.

5 ಮತ್ತು 8 ನೇ ತರಗತಿಯ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು.

5 ಮತ್ತು 8 ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ. ಇದು ಕೇವಲ ಮೌಲ್ಯಾಂಕನವಾಗಿದೆ.  ಈ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನ್ಯತೆ, ಕಲಿಕಾ ಪ್ರಗತಿ ತಿಳಿದುಕೊಂಡು ಮುಂದಿನ ಶೈಕ್ಷಣಿಕ ವರ್ಷಕ್ಕೆ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮ ಹಮ್ಮಿಕೊಳ್ಳುವುದು ಪ್ರಮುಖ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಲಾಗಿದೆ.

ಈ ಮೌಲ್ಯಾಂಕನದ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಈ ಮೂಲಕ ಫಲಿತಾಂಶದ ಗೌಪ್ಯತೆಯನ್ನು ಕಾಪಾಡಲಾಗುವುದು. ಪಠ್ಯಪುಸ್ತಕವನ್ನಾಧರಿಸಿ ಮೌಲ್ಯಾಂಕನಕ್ಕೆ ಪ್ರಶ್ನೆ ಸಿದ್ದಪಡಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...