HomeKarnatakaBIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾ ತೆರಳುತ್ತಿದ್ದಾಗ ಭದ್ರತಾ ಲೋಪ

BIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾ ತೆರಳುತ್ತಿದ್ದಾಗ ಭದ್ರತಾ ಲೋಪ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಹೆಚ್ ಎ ಎಲ್ ಗೆ ತೆರಳುತ್ತಿದ್ದ ವೇಳೆ ಭದ್ರತಾ ಲೋಪವಾಗಿದೆ.

ಅಮಿತ್ ಶಾ ಅವರು ತಾಜ್ ವೆಸ್ಟ್ ಎಂಡ್ ನಿಂದ ಹೆಚ್ ಎ ಎಲ್ ಗೆ ತೆರಳುತ್ತಿದ್ದ ವೇಳೆ ಬೆಂಗಾವಲು ಪಡೆ ವಾಹನದ ಹಿಂದೆ ಸವಾರರು ಬಂದಿದ್ದಾರೆ. ಸಫೀನಾ ಫ್ಲಾಜಾದಿಂದ ಬೆಂಗಾವಲು ವಾಹನ ಪಡೆಗಳ ಹಿಂದೆ ಬೈಕ್ ಸವಾರರು ಬಂದಿದ್ದಾರೆ. ನಿನ್ನೆ ರಾತ್ರಿ ಅಮಿತ್ ಶಾ ಅವರು ಹೆಚ್ ಎ ಎಲ್ ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಮಣಿಪಾಲ್ ಸೆಂಟರ್ ವರೆಗೆ ಹಿಂಬಾಲಿಸಿ ಬಂದಿದ್ದ ಬೈಕ್ ಸವಾರರನ್ನು ತಕ್ಷಣ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಇಬ್ಬರು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಮೇಲ್ನೋಟಕ್ಕೆ ವಿದ್ಯಾರ್ಥಿಗಳು ಉದ್ದೇಶಪೂರ್ವಕವಾಗಿ ಬಂದಿಲ್ಲ ಎನ್ನಲಾಗಿದೆ. ಭಾರತಿನಗರ ಠಾಣೆಯಲ್ಲಿ ಎನ್ ಸಿ ಆರ್ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular