HomeIndiaBIG NEWS: ಒಂದೇ ದಿನ ಮತ್ತೆ 1800ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

BIG NEWS: ಒಂದೇ ದಿನ ಮತ್ತೆ 1800ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ ಮತ್ತೆ 1800 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 1,805 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,837 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 10,300 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,64,815 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 01,743 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,54,022 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 56,551 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular