HomeKarnatakaBIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ

ದಾವಣಗೆರೆ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.

ಬಂಧನ ಭೀತಿಯಲ್ಲಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ.

ಹೈಕೋರ್ಟ್ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಸುದ್ದಿ ತಿಳಿಯುತ್ತಿದ್ದಂತೆ ಚನ್ನಗಿರಿಯಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಾಸಕರು ಮತ್ತೆ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular